ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿ ಹೆಸರು ಪ್ರಸ್ತಾಪಿಸಿದ ಚೈತ್ರಾ ಕುಂದಾಪುರ

Prasthutha|

ಬೆಂಗಳೂರು: ಚೈತ್ರಾ ಕುಂದಾಪುರ ವಿಧಾನ ಸಭಾ ಚುನಾವಣೆಯಲ್ಲಿ ಬೈಂದೂರಿನಿಂದ ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಬಳಿ 5 ಕೋಟಿ ರೂ. ವಂಚಿಸುವುದಲ್ಲದೇ ಆತನ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆಯಲಾಗಿದೆ. ಜೊತೆಗೆ ಪತ್ರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿ ಹೆಸರನ್ನು ಸಹ ಚೈತ್ರಾ ಕುಂದಾಪುರ ಪ್ರಸ್ತಾಪ ಮಾಡಿದ್ದಾರೆ.

- Advertisement -


ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದು ಮಂಗಳೂರಿನ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.