ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಇಂದು ಬೆಳಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದು ಸಂಚಲನ ಸೃಷ್ಟಿಸಿದೆ. ಇಂದು ಬೆಳಗ್ಗೆ ಸಿಸಿಬಿ ಕಚೇರಿ ಬಳಿ ಜೀಪ್ ನಿಂದ ಇಳಿಯುತ್ತಲೇ, ಸ್ವಾಮೀಜಿ ಬಂಧನದ ಬಳಿಕ ದೊಡ್ಡವರ ಹೆಸರು ಬರಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಳು.
ಗೋವಿಂದ ಬಾಬು ಪೂಜಾರಿ ಚೆಫ್ ಟಾಕ್ ಸಂಸ್ಥೆಯ ಮಾಲೀಕರಾಗಿದ್ದು, ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರನಾಗಿದ್ದಾರೆ. 2017ರಿಂದಲೇ ಚೆಫ್ ಟಾಕ್ ಎಂಬ ಕಂಪನಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್ ಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಾಗಾಗಿ ಚೈತ್ರಾ ಕುಂದಾಪುರ ಹೇಳಿಕೆ ಸಂಚಲನ ಸೃಷ್ಟಿಸಿದೆ.