ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಇಂದು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ

Prasthutha|

- Advertisement -

ಬೆಂಗಳೂರು: ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ​​ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ‌ ಎಂದು ತಿಳಿದು ಬಂದಿದೆ.

ಇನ್ನು ಶನಿವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶನಿವಾರ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಿದ್ದಾರೆ.

- Advertisement -

ಎ3 ಅಭಿನವ ಹಾಲಶ್ರೀ ಸ್ವಾಮೀಜಿ ಹೊರತುಪಡಿಸಿ ಎ1 ಚೈತ್ರಾ ಕುಂದಾಪುರ, ಎ2 ಗಗನ್ ಕಡೂರು, ಎ4 ರಮೇಶ್, ಎ5 ಚೆನ್ನನಾಯ್ಕ್, ಎ6 ಧನರಾಜ್, ಎ7 ಶ್ರೀಕಾಂತ್ ಆರೋಪಿಗಳನ್ನು ಇಂದು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Join Whatsapp