Home ಟಾಪ್ ಸುದ್ದಿಗಳು ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಇಂದು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಇಂದು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ

ಬೆಂಗಳೂರು: ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ​​ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ‌ ಎಂದು ತಿಳಿದು ಬಂದಿದೆ.

ಇನ್ನು ಶನಿವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶನಿವಾರ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಿದ್ದಾರೆ.

ಎ3 ಅಭಿನವ ಹಾಲಶ್ರೀ ಸ್ವಾಮೀಜಿ ಹೊರತುಪಡಿಸಿ ಎ1 ಚೈತ್ರಾ ಕುಂದಾಪುರ, ಎ2 ಗಗನ್ ಕಡೂರು, ಎ4 ರಮೇಶ್, ಎ5 ಚೆನ್ನನಾಯ್ಕ್, ಎ6 ಧನರಾಜ್, ಎ7 ಶ್ರೀಕಾಂತ್ ಆರೋಪಿಗಳನ್ನು ಇಂದು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Join Whatsapp
Exit mobile version