ಚೈತ್ರಾ ಕುಂದಾಪುರ ಬಾಯಲ್ಲಿದ್ದದ್ದು ಸೋಪು ನೊರೆ: ಡಾ.ದಿವ್ಯಪ್ರಕಾಶ್

Prasthutha|

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.

- Advertisement -


ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ವೈದ್ಯ ಡಾ.ದಿವ್ಯಪ್ರಕಾಶ್, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ.


ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ ಎಂದರು.