ಚೈತ್ರಾ ಹಿಂದೂ ಪರ ಭಾಷಣಕ್ಕೂ, ಈ ಪ್ರಕರಣಕ್ಕೆ ತಳಕು ಹಾಕುವುದು ಬೇಡ: ಗೃಹ ಸಚಿವ ಪಮೇಶ್ವರ್

Prasthutha|

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

- Advertisement -


ಈ ಬಗ್ಗೆ ಮೊದಲ ಬಾರಿಗೆ ಗೃಹ ಸಚಿವ ಡಾ ಜಿ ಪಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.

ಈ ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.



Join Whatsapp
Exit mobile version