ನನ್ನನ್ನು ಜೈಲಿಗೆ ಹಾಕುತ್ತೀರಾ? ಸಚಿವ ಎಂಬಿ ಪಾಟೀಲ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ

Prasthutha|

ವಿಜಯಪುರ: ಶಿವಾಜಿಯ ವಂಶಸ್ಥರು ನಾವು, ನನ್ನನ್ನು ಜೈಲಿಗೆ ಹಾಕುತ್ತೀರಾ ಎಂದು ಹೇಳಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಸಚಿವ ಎಂಬಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ನಿನ್ನೆ (ಜೂನ್ 24) ಸಂಜೆ ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಡೆದ ಗೋ ಸಮಾವೇಶದಲ್ಲಿ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನೀವು ಆಯ್ಕೆ ಮಾಡಿರುವ ಶಾಸಕರೊಬ್ಬರು ಚಕ್ರವರ್ತಿ ಸೂಲಿಬೆಲೆನಾ ಜೈಲಿಗೆ ಹಾಕುತ್ತೇನೆ ಎಂದು ಹೇಳುತ್ತಾರೆ. ಅಯ್ಯೋ ಪುಣಾತ್ಮ ನಾವು ಶಿವಾಜಿಯ ವಂಶಸ್ಥರು, ನಾನು ರಾಣಾ ಪ್ರತಾಪರ ವಂಶಸ್ಥ, ನಾನು ಸಾವರ್ಕರ್ ವಂಶಸ್ಥ. ನಾನು ಭಗತಸಿಂಗ್ ಹೆಸರು ಹೇಳಿಕೊಂಡು ಬಂದವನು. ನನ್ನನ್ನ ಒಳಗೆ ಹಾಕುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -

ಈ ಹಿಂದೆ ಪಠ್ಯ ಪುಸ್ತಕ ಮರು ಪರಿಷ್ಕರಣೆ ಚರ್ಚೆ ಸಮಯದಲ್ಲಿ ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂಬಿ ಪಾಟೀಲ್ ಅವರು ಎಚ್ಚರಿಕೆ ನೀಡಿದ್ದರು. ಇದರ ಮುಂದುವರಿದ ಭಾಗವಾಗಿ ಚಕ್ರವರ್ತಿ ಸೂಲಿಬೆಲೆ ಅವರು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.