‘ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು’ ಎಂದ ಸೂಲಿಬೆಲೆ

Prasthutha|

ಬೆಂಗಳೂರು: ಹಣ ಪಡೆದು ವಂಚನೆ ಎಸಗಿದ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ನನಗೆ ಮೂರು ತಿಂಗಳ ಹಿಂದೆಯೇ ಗೊತ್ತಿತ್ತು ಎಂದು ಯುವ ಬ್ರಿಗೇಡ್ ಸಂಘಟನೆ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

- Advertisement -

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ದಿನಕ್ಕೊಂದು ಹೊಸಹೊಸ ವಿಚಾರಗಳು ಹೊರಬೀಳುತ್ತಿವೆ. ಅಭಿನವ ಹಾಲಶ್ರೀ ಹೆಸರಿನ ಬೆನ್ನಲ್ಲೇ, ವಜ್ರದೇಹಿ ಮಠದ ಸ್ವಾಮೀಜಿ ಹಾಗೂ ಚಕ್ರವರ್ತಿ ಸೂಲಿಬೆಲೆ ಹೆಸರು ಕೇಳಿಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೂಲಿಬೆಲೆ, ಉದ್ಯಮಿ ಗೋವಿಂದಬಾಬು ಪೂಜಾರಿ ನನಗೆ ತುಂಬಾ ಆತ್ಮೀಯ ಸ್ನೇಹಿತರು. ಗೋವಿಂದಬಾಬು ಪೂಜಾರಿ ಮೋಸ ಹೋಗಿದ್ದಕ್ಕೆ ನನಗೆ ಬೇಸರವಿದೆ. ಈ ವಿಚಾರವನ್ನು ನಾನು ಈ ಹಿಂದೆಯೇ ಸಿ.ಟಿ.ರವಿ ಗಮನಕ್ಕೂ ತಂದಿದ್ದೆ. ಬಿಜೆಪಿಯಲ್ಲಿ ಈ ರೀತಿ ನಡೆಯಲ್ಲವೆಂದು ಜನರಿಗೆ ಗೊತ್ತಾಗಬೇಕು. ಗೊತ್ತಾಗೋದರಲ್ಲಿ ತಪ್ಪಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾಗಿ ತಿಳಿಸಿದರು.

- Advertisement -

ಚೈತ್ರಾ ಕುಂದಾಪುರ ಅವರನ್ನು ಸುಮಾರು 10 ವರ್ಷಗಳ ಹಿಂದೆ ನೋಡಿದ್ದೆ. ಹಣ ಪಡೆದು ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಬಂದಿದ್ದಕ್ಕೆ ಬೇಸರವಿಲ್ಲ. ಸಿಸಿಬಿ ಕರೆದರೆ ವಿಚಾರಣೆಗೆ ಹೋಗುತ್ತೇನೆ, ಮಾಹಿತಿ ಕೇಳಿದರೆ ನೀಡುತ್ತೇನೆ ಎಂದರು.