ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಜಾತಿನಿಂದನೆ ದೂರು ನೀಡಿದ್ದಾರೆ.
ಹೈಗೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ, ನನ್ನ ವಿರುದ್ಧ ಸಿದ್ದರಾಮಯ್ಯ ಅವರು ಜಾತಿ ನಿಂದನೆ ಮಾಡಿದ್ದಾರೆ. ಸದಾ ನೀವು ಅಸ್ಪೃಶ್ಯರು, ಗುಲಾಮರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುತ್ತಾರೆ. ಹೀಗಾಗಿ ಎಸ್ ಸಿ, ಎಸ್ ಟಿ ಕಾಯ್ದೆ ಅನ್ವಯ ಅವರ ವಿರುದ್ಧ ಜಾತಿನಿಂದನೆ ದೂರು ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಪೊಲೀಸರು ಕೂಡಲೇ ಎಫ್ ಐ ಆರ್ ದಾಖಲಿಸಬೇಕು ಮತ್ತು ಸಿದ್ದರಾಮಯ್ಯ ಅವರನ್ನು ಕೂಡಲೇ ಬಂಧಿಸಬೇಕು. ಸಿದ್ದರಾಮಯ್ಯನವರನ್ನು ಬಂಧಿಸದಿದ್ದರೆ ನಾನು ಪ್ರತಿಭಟನೆ ಮಾಡುತ್ತೇನೆ. ಕೂಡಲೇ ಅಟ್ರಾಸಿಟಿ ಕೇಸ್ ಅಡಿ ದೂರು ದಾಖಲಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.