ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ.
ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ. ಇನ್ನು ವಿಪಕ್ಷ ನಾಯಕನ ಹುದ್ದೆ ರೇಸ್ನಲ್ಲಿದ್ದ ಸಿಟಿ ರವಿ ಮತ್ತು ರವಿ ಕುಮಾರ್ ಅವರಿಗೆ ನಿರಾಸೆಯಾಗಿದೆ.