Home ಟಾಪ್ ಸುದ್ದಿಗಳು ಕೊನಾರ್ಕ್ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ತಂಗಡಗಿ

ಕೊನಾರ್ಕ್ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ತಂಗಡಗಿ

0

ಬೆಂಗಳೂರು: ಒಡಿಶಾದ ಪ್ರಸಿದ್ಧ ಕೊನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ.

ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾತನಾಡಿದ ಸಚಿವರು, ”2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು” ಎಂದು ಹೇಳಿದರು.

ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ.‌ ವರ್ಷಾಂತ್ಯಕ್ಕೆ‌ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ‌ ಸಭೆಯಲ್ಲಿ ದಿನಾಂಕ ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

NO COMMENTS

LEAVE A REPLY

Please enter your comment!
Please enter your name here

Exit mobile version