ಚಾಮರಾಜನಗರ: ಇಬ್ಬರು ಅತ್ಯಾಚಾರಿಗಳಿಗೆ 20 ವರ್ಷ ಕಠಿಣ ಶಿಕ್ಷೆ

Prasthutha|

ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಅಪರಾಧಿಗಳಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.

- Advertisement -

ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಮಹೇಶ್ ಪ್ರಸಾದ್, ವೆಂಕಟಯ್ಯನಛತ್ರ ಗ್ರಾಮದ ಸಿದ್ದಮಲ್ಲು ಶಿಕ್ಷೆಗೊಳಗಾದ ಅಪರಾಧಿಗಳು. ಇವರಿಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನೀಡಿದ್ದು, ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನೆಲೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ ವಿಶೇಷ ಪೋಕ್ಸೋ ನ್ಯಾಯಾಧೀಶರಾದ ಎನ್.ಆರ್.ಲೋಕಪ್ಪ 20 ವರ್ಷ ಕಠಿಣ ಶಿಕ್ಷೆ, 55 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

Join Whatsapp