ಚಾಮರಾಜನಗರ: ಹೆದ್ದಾರಿಯಲ್ಲಿ ಚಿರತೆ ಮೃತದೇಹ ಪತ್ತೆ

Prasthutha|

ಚಾಮರಾಜನಗರಗುರುಮಲ್ಲಪ್ಪನದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಗಂಡು ಚಿರತೆಯೊಂದರ ಮೃತದೇಹ ಪತ್ತೆಯಾಗಿದ್ದು, ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

- Advertisement -

ಲೊಕ್ಕನಹಳ್ಳಿಯಿಂದ ತಮಿಳುನಾಡಿನ ಸತ್ಯ ಮಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.

 ಮಂಗಳವಾರ ಮುಂಜಾನೆ  ರಸ್ತೆಯಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಿಆರ್‌ ಟಿಯ  ಬೈಲೂರು ವಲಯದ ಸಿಬ್ಬಂದಿ  ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Join Whatsapp