ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಹ್ವಾನ ನೀಡಿದರೂ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬಿಜೆಪಿ ಸಮಾವೇಶಕ್ಕೆ ತೆರಳಲಿಲ್ಲ.
ಮೈಸೂರು ನಗರದ ಜಯಲಕ್ಷ್ಮಿಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ ಯಡಿಯೂರಪ್ಪ ಅಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.ವಿ.ಶ್ರೀನಿವಾಸಪ್ರಸಾದ್ ಅವರನ್ನು ಬಿಜೆಪಿ ಸಮಾವೇಶಕ್ಕೆ ಆಹ್ವಾನಿಸಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಸಂಸದ ಶ್ರೀನಿವಾಸಪ್ರಸಾದ್ ಹಿರಿಯ ನಾಯಕರು. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದೇನೆ. ಬಿಜೆಪಿಯ ಸಂಸದರಾಗಿ ಐದು ನಿಮಿಷ ಬಂದು ಹೋಗಿ ಎಂದು ಮನವಿ ಮಾಡಿದ್ದು, ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.