ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಮರು ತನಿಖೆ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಮರು ತನಿಖೆ ನಡೆಸಲಾಗುವುದು. ಈ ಹಿಂದೆ ಇದ್ದ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಆಕ್ಸಿಜನ್ ದುರಂತದ ಬಗ್ಗೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೊಸ ಸರ್ಕಾರ ಬಂದಿದ್ದರಿಂದ ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -


ಆಕ್ಸಿಜನ್ ದುರ್ಘಟನೆ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಕೋವಿಡ್ ನಿರ್ವಹಣಾ ಸಮಿತಿಯು ಹೈಕೋರ್ಟ್ ಗೆ ಈಗಾಗಲೇ ವರದಿ ಸಲ್ಲಿಸಿದ್ದು, 2021ರ ಮೇ 2-3 ರ ರಾತ್ರಿ 36 ಒಳರೋಗಿಗಳ ಸಾವಿಗೆ ಆಮ್ಲಜನಕದ ಲಭ್ಯತೆ ಕೊರತೆಯೇ ಕಾರಣ ಎಂದು ಉಲ್ಲೇಖಿಸಿದೆ.
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾವಿಗೆ ಯಾರು ಹೊಣೆ ಮತ್ತು ತಪ್ಪಿತಸ್ಥರು ಯಾರು ಎಂಬುದರ ಪತ್ತೆಗೆ ಯಾವುದೇ ತನಿಖೆ ನಡೆದಿಲ್ಲ. ಹೀಗಾಗಿ ತಕ್ಷಣ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ ಎಂದರು.



Join Whatsapp