ಚಾಮರಾಜಪೇಟೆ ಈದ್ಗಾ ವಿವಾದ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

Prasthutha|

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣವನ್ನು ತ್ರಿ ಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದೆ

- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವನ್ನು ಗಣೇಶ ಚತುರ್ಥಿಗಾಗಿ ಬಳಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಪ್ರಕರಣವನ್ನು ತ್ರಿ ಸದಸ್ಯ ಪೀಠಕ್ಕೆ ವರ್ಗಾಯಿಸಿದ್ದಾರೆ.

ವಕ್ಫ್ ಬೋರ್ಡ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದು, ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Join Whatsapp