ಚಾಮರಾಜಪೇಟೆ ಈದ್ಗಾ ಆಟದ ಮೈದಾನದಲ್ಲಿ ಅದ್ಧೂರಿ ಧ್ವಜಾರೋಹಣ: ಶಾಸಕ ಜಮೀರ್ ಅಹ್ಮದ್ ಖಾನ್

Prasthutha|

ಬೆಂಗಳೂರು: ಈ ವರ್ಷ ಚಾಮರಾಜಪೇಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಈದ್ಗಾ ಆಟದ ಮೈದಾನದಲ್ಲಿ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿ, ಅತ್ಯಂತ ಸಡಗರದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಗುವುದು ಎಂದು ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

- Advertisement -

ಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ಸಿದ್ಧತೆ ಮಾಡಿಕೊಳ್ಳಲು ಇಂದು ಚಾಮರಾಜಪೇಟೆಯ ಆಟದ ಮೈದಾನವನ್ನು ವೀಕ್ಷಿಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು.

 ಮಾಧ್ಯಮದವರು ದಯವಿಟ್ಟು ಗೊಂದಲ ಸೃಷ್ಟಿಸಬೇಡಿ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂದು ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಇನ್ನು ಮುಂದೆ ಪ್ರತಿ ವರ್ಷ ಧ್ವಜಾರೋಹಣ ಮಾಡುತ್ತೇವೆ. ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಬಿ.ವಿ ಗಣೇಶ್, ಬಿಬಿಎಂಪಿ ಹಾಲಿ ಸದಸ್ಯರಾದ ಕೋಕಿಲ ಚಂದ್ರಶೇಖರ್ ಹಾಗೂ ಮತ್ತಿತರ ದೇವಸ್ಥಾನಗಳ ಸದಸ್ಯರು ಮುಖಂಡರ ಜೊತೆ ಚರ್ಚಿಸಿ, ಈ ಬಾರಿ 15ರಂದು ಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ಸ್ಥಳ ನಿಗದಿ ಪಡಿಸುತ್ತೇವೆ ಎಂದು ಅವರು ತಿಳಿಸಿದರು.

- Advertisement -

ಬಿಬಿಎಂಪಿ ಚಾಮರಾಜಪೇಟೆಯ ಈದ್ಗಾ ಮೈದಾನ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳಿದೆ. ಇದರ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕರು, 1999ಕ್ಕಿಂತ ಮೊದಲು ವಕ್ಫ್ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎರಡೂ ಕಂದಾಯ ಇಲಾಖೆ ಅಧೀನದಲ್ಲೇ ಇದ್ದವು. ಎಸ್. ಎಮ್. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಕ್ಫ್ ಮಂಡಳಿಯನ್ನು ಪ್ರತ್ಯೇಕಿಸಿದರು. ಮೈದಾನದ ವಿಚಾರವನ್ನು ವಕ್ಫ್ ಮಂಡಳಿಯವರು ನೋಡಿಕೊಳ್ಳುತ್ತಾರೆ. ಸದ್ಯ ನಾವು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುವ ತಯಾರಿಯಲ್ಲಿದ್ದೇವೆ ಎಂದು ಹೇಳಿದರು.



Join Whatsapp