ಮುಂಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಭಾರತದ 15 ಸದಸ್ಯರ ಕ್ರಿಕೆಟ್ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ರೋಹಿತ್ ಶರ್ಮಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್ ಗಿಲ್ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಯು ಫೆ. 19ರಿಂದ ಆರಂಭವಾಗಲಿದ್ದು, ಪಾಕಿಸ್ತಾನವು ಆತಿಥ್ಯ ವಹಿಸಿದೆ. ಫೈನಲ್ಸ್ ಮಾರ್ಚ್ 9ಕ್ಕೆ ನಡೆಯಲಿದೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜ, ರಿಷಬ್ ಪಂತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.