Home ಟಾಪ್ ಸುದ್ದಿಗಳು ಚಾಂಪಿಯನ್ಸ್ ಟ್ರೋಫಿ-2025: ಸ್ಥಳ ನಿಗದಿಪಡಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಚಾಂಪಿಯನ್ಸ್ ಟ್ರೋಫಿ-2025: ಸ್ಥಳ ನಿಗದಿಪಡಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಕರಾಚಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ-25 ನಡೆಯಲಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB) ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ.

ಜತೆಗೆ ಭಾರತದ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಹೈಬ್ರಿಡ್ ಮಾದರಿ’ಯ ಊಹಾಪೋಹದ ಹೊರತಾಗಿಯೂ ಪಂದ್ಯಾವಳಿ ಸಂಪೂರ್ಣವಾಗಿ ಪಾಕ್​ನಲ್ಲಿಯೇ ನಡೆಯಲಿದೆ ಎಂಬ ವಿಶ್ವಾಸ ಕೂಡ ವ್ಯಕ್ತಪಡಿಸಿದೆ.

2017 ರಲ್ಲಿ ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆ ಇದೆ.

ಲಾಹೋರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ನಾವು ಪಾಕಿಸ್ತಾನದಲ್ಲಿ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಐಸಿಸಿಯ ಭದ್ರತಾ ತಂಡವು ಪಾಕಿಸ್ತಾನಕ್ಕೆ ಬಂದು ನಮ್ಮ ಜತೆ ಸಭೆ ನಡೆಸಿದೆ. ಈ ಸಭೆ ಉತ್ತಮವಾಗಿತ್ತು.ಅವರಿಗೆ ಇಲ್ಲಿನ ವ್ಯವಸ್ಥೆಗಳನ್ನು ನೋಡಿ ತೃಪ್ತಿಯಾಗಿದೆ. ನಾವು ಪಾಕಿಸ್ತಾನದಲ್ಲಿ ಉತ್ತಮ ಪಂದ್ಯಾವಳಿಯನ್ನು ಆಯೋಜಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನಖ್ವಿ ಹೇಳಿದ್ದಾರೆ.

Join Whatsapp
Exit mobile version