ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ: ಬಿಜೆಪಿ ಸಂಸದ ಯದುವೀರ್’ಗೆ ಪ್ರತಾಪ್ ಸಿಂಹ ಟಾಂಗ್

Prasthutha|

ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದ ಮಾಜಿ ಸಂಸದ

- Advertisement -

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರಕ್ಕೆ ಮೈಸೂರು ರಾಜಮನೆತನ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಅಗತ್ಯವಿದೆ ಎಂದು ಸಂಸದ ಯದುವೀರ್ ಒಡೆಯರ್ ಗೆ ಟಾಂಗ್ ನೀಡಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಬೆಟ್ಟದ ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆ ಇದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಬೇಕಿದ್ದರೆ ಒಂದು ಪ್ರಾಧಿಕಾರ ಬೇಕೇ ಬೇಕು. ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಪ್ರಾಧಿಕಾರ ರಚನೆ ಮಾಡಿದ್ದಾರೆ, ಇದು ಒಳ್ಳೆಯ ಕೆಲಸ ಎಂದರು.

- Advertisement -


ಸಿಎಂ ಸಿದ್ದರಾಮಯ್ಯರನ್ನು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.


ಆಸ್ತಿ ವಿಚಾರವಾಗಿ ಮಾತನಾಡುವುದಿಲ್ಲ. ಆದರೆ, ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾದದ್ದು ಸರ್ಕಾರದ ಕರ್ತವ್ಯ ಎಂದು ಪ್ರತಾಪ್ ಸಿಂಹ ಹೇಳಿದರು.
ಅಮೃತ್ ಯೋಜನೆಯ ಕುಡಿಯುವ ನೀರು ತಲುಪದಿರಲು ಕಾರಣ ಯಾರು? ನಾನು ಹೇಳಿದರೆ ವಿವಾದ ಆಗುತ್ತದೆ. ಪೈಪ್ ಲೈನ್ ಬಗ್ಗೆ ನೀವೇ ನೋಡಿ ಎಂದು ಯದುವೀರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.



Join Whatsapp