ಚಂದ್ರಬಾಬು ನಾಯ್ಡು ಮತ್ತು ಮೋಹನ್ ಚರಣ್ ಮಾಝಿ ಸಿಎಂ ಆಗಿ ಇಂದು ಪ್ರಮಾಣ ವಚನ: ಎರಡೂ ಸಮಾರಂಭದಲ್ಲಿ ಪ್ರಧಾನಿ ಭಾಗಿ

Prasthutha|

ನವದೆಹಲಿ: ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತ ಪಡೆದಿದ್ದು, ಬುಡಕಟ್ಟು ಜನಾಂಗದ ನಾಯಕ ಮೋಹನ್‌ ಚರಣ್ ಮಾಝಿ ಇಂದು ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನೂತನ ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ.

- Advertisement -

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಕೂಡ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಎರಡೂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ವಿವಿಧ ಗಣ್ಯರು ಹಾಜರಿರಲಿದ್ದಾರೆ.

- Advertisement -

ಒಡಿಶಾದ ಭುವನೇಶ್ವರದಲ್ಲಿ ಬಿಜೆಪಿಯ ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ಅಲ್ಲಿನ ಜನತಾ ಮೈದಾನದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ. ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.

147 ಸದಸ್ಯ ಬಲದ ಒಡಿಶಾ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳನ್ನು ಪಡೆದಿದೆ.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಅದೇ ರೀತಿ 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

ನಾಯ್ಡು ಅವರು 1995ರಿಂದ 1999, 2004ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು.



Join Whatsapp