ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

Prasthutha|

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಟ ರಜನಿಕಾಂತ್, ಪವನ್ ಕಲ್ಯಾಣ್ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್ ಡಿಎ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

- Advertisement -

ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಇನ್ನು ಒಡಿಶಾದಲ್ಲಿ ಬಿಜೆಪಿ 147ರಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ.

Join Whatsapp
Exit mobile version