ಚಂದ್ರಶೇಖರ್ ಗುರೂಜಿ ಹತ್ಯೆ: ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಲು ಕ್ರಮ- ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯವಾಗಿದ್ದು, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯನ್ನು ನೀಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾನತಾಡಿದರು.

ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಹೀನ ಕೃತ್ಯ ಹಾಗೂ ದುರದೃಷ್ಟಕರವಾಗಿದೆ. ಸಿಸಿಟಿವಿ ವಿಡಿಯೋದಲ್ಲಿ ಎಲ್ಲ ಸ್ಪಷ್ಟವಾಗಿದೆ. ನಗರ ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಸಿಸಿಟಿವಿ ವಿಡಿಯೋದಲ್ಲಿರುವ ಕೊಲೆಪಾತಕರನ್ನು ಬಂಧಿಸಲು ತಿಳಿಸಲಾಗಿದ್ದು, ಪ್ರಕ್ರಿಯೆ ನಡೆದಿದೆ. ಕೊಲೆ ನಡೆದಿರುವ ಕಾರಣ ತನಿಖೆಯಿಂದ ತಿಳಿದು ಬರಲಿದೆ. ಬಹಿರಂಗವಾಗಿ ಇಂತಹ ಘಟನೆಗಳು ಅತ್ಯಂತ ಖಂಡನೀಯ ಎಂದರು.



Join Whatsapp