ಚಂದ್ರಶೇಖರ್ ಸಾವು ಪ್ರಕರಣ: ವಿನಯ್ ಗುರೂಜಿ ವಿಚಾರಣೆ ನಡೆಸಿದ ಪೊಲೀಸರು

Prasthutha|

ಚಿಕ್ಕಮಗಳೂರು: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ವಿನಯ್ ಗುರೂಜಿ ಅವರನ್ನು ವಿಚಾರಣೆಗೊಳಪಡಿಸಿದೆ.

- Advertisement -


ತನಿಖಾ ತಂಡ ಈಗಾಗಲೇ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ಸಾವನ್ನಪ್ಪಿದ ಚಂದ್ರು ಯಾವ ವಿಚಾರವನ್ನು ನಿಮ್ಮ ಜೊತೆ ಮಾತನಾಡಿದರು.? ಭೇಟಿ ವೇಳೆ ಏನಾದರೂ ಸಮಸ್ಯೆಯನ್ನು ನಿಮ್ಮೊಂದಿಗೆ ಹೇಳಿಕೊಂಡಿದ್ರಾ? ಚಂದ್ರು, ಕಿರಣ್ ಹಾಗೂ ನಿಮ್ಮ ಮಧ್ಯೆ ಏನಾದರೂ ಚರ್ಚೆ ನಡೆಯಿತಾ ಎಂದು ವಿನಯ್ ಗುರೂಜಿ ಬಳಿ ಪೊಲೀಸರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.
ಚಂದ್ರು ಆಶ್ರಮದ ಭಕ್ತ, ಪ್ರತಿ ಬಾರಿಯಂತೆ ಈ ಬಾರಿಯೂ ಬಂದು ಹೋಗಿದ್ದಾನೆ. ತಡವಾಗಿ ಬಂದಿದ್ದರಿಂದ ಆತನ ಬಳಿ ಹೆಚ್ಚೇನೂ ನಾನು ಮಾತನಾಡಿಲ್ಲ. ತಡವಾಗಿ ಬಂದಿದ್ದಕ್ಕೆ ಇದು ಆಶ್ರಮಕ್ಕೆ ಭೇಟಿ ನೀಡುವ ಸಮಯವಾ ಎಂದು ಕೇಳಿದ್ದೇನೆ. ಬೇಗ ಹೋಗಿ, ಜಾಗೃತೆಯಿಂದ ಹೋಗಿ ಎಂದು ಇಬ್ಬರನ್ನು ಕಳುಹಿಸಿಕೊಟ್ಟಿದ್ದೇನೆ, ಆ ಬಳಿಕ ನಡೆದ ಘಟನೆ ಬಗ್ಗೆ ನನಗೆ ನೋವಿದೆ ಎಂದು ಗುರೂಜಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಈ ನಡುವೆ ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್ ಎಸ್ ಎಲ್ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.
ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇಂದು ಚಂದ್ರು ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್ಎಸ್ಎಲ್ ನ ಪ್ರಾಥಮಿಕ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ.

- Advertisement -


ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಸಂಬಂಧ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇತ್ತ ಎಫ್ಎಸ್ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಸಾಕ್ಷ್ಯ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ತಾಂತ್ರಿಕ ಸಾಕ್ಷ್ಯ ಕೂಡ ಸಂಗ್ರಹ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್ ನಲ್ಲಿ ಬಂದ ಹಿನ್ನೆಲೆ ಕಾಲುವೆಗೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.



Join Whatsapp