ಚಂದ್ರಯಾನ-3 ಸಕ್ಸಸ್: ಇಸ್ರೋ ಅಧ್ಯಕ್ಷರು, ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

Prasthutha|

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದರು.

- Advertisement -


ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಇಸ್ರೋ ವಿಜ್ಞಾನಿಗಳಿಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದರು.



Join Whatsapp