ಹೊಸದಿಲ್ಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಇಂದು (ಆಗಸ್ಟ್ 5) ಸಂಜೆ 7.15ಕ್ಕೆ ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ.
ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಉಡ್ಡಯನ ಮಾಡಲಾಗಿತ್ತು. ಇದೀಗ ನೌಕೆಯು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ ಎಂದು ಇಸ್ರೋ ತಿಳಿಸಿದೆ.