►ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ
ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೂರನೇ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಇಂದು ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.
ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ನಡೆದಿದೆ.