Home ಟಾಪ್ ಸುದ್ದಿಗಳು ಕಾಂಗ್ರೆಸ್’ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಕಾಂಗ್ರೆಸ್’ಗೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ. ತನ್ನ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ತನ್ನ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಜನಸೇವೆ ಮಾಡುವ ಆಶಯದಿಂದ ಪಕ್ಷಕ್ಕೆ ಸೇರ್ಪಡೆ ಹೊಂದಿದೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪ್ತಿಯಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸಕ್ತ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನನ್ನ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕ್ರತಿಕ ಘಟಕಾಧ್ಯಕ್ಷ ಸ್ಥಾನವನ್ನು ವಹಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಇಲ್ಲಿಯವರೆಗೆ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು” ಎಂದು ರಾಜೀನಾಮೆ ಪತ್ರದಲ್ಲಿ ನಮೂದಿಸಿದ್ದಾರೆ.

Join Whatsapp
Exit mobile version