Home ಟಾಪ್ ಸುದ್ದಿಗಳು ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿ.ಕೆ.ಶಿವಕುಮಾರ್

ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿ.ಕೆ.ಶಿವಕುಮಾರ್

ಬೆಂಗಳೂರು: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸೋದು ಮುಖ್ಯ ಅಲ್ಲಾ. ದೇಶದ ಎಲ್ಲಾ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ? 15 ಲಕ್ಷ ರೂ. ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರೂ ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.


ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ ಪೋರ್ಟ್ ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವವನ್ನು ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ ಎಂದರು.

Join Whatsapp
Exit mobile version