ಚನ್ನಗಿರಿ ಲಾಕಪ್ ಡೆತ್ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

Prasthutha|

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

- Advertisement -


ಚನ್ನಗಿರಿ ಡಿವೈಎಸ್ ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್ ಇನ್ ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್ ಐ ಅಕ್ತರ್ ಅವರನ್ನು ಅಮಾನತು ಗೃಹ ಸಚಿವ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ವಶದಲ್ಲಿದ್ದ ಆದಿಲ್ ಎಂಬ ಯುವಕ ಮೇ 24 ರಂದು ಮೃತಪಟ್ಟಿದ್ದರು. ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಆರೋಪಿಸಿ ಚನ್ನಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

Join Whatsapp
Exit mobile version