Home ಟಾಪ್ ಸುದ್ದಿಗಳು ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್’ನಿಂದ ಮತ್ತೆ ಬಿಗ್ ಆಪರೇಷನ್

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್’ನಿಂದ ಮತ್ತೆ ಬಿಗ್ ಆಪರೇಷನ್

►ಬಿಜೆಪಿಯ 6 ಮಂದಿ ನಗರಸಭಾ ಸದಸ್ಯರು ಕಾಂಗ್ರೆಸ್ ಸೇರ್ಪಡೆ


ಚನ್ನಪಟ್ಟಣ: ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರನ್ನೇ ಪಕ್ಷಕ್ಕೆ ಸೆಳೆದು ಅಭ್ಯರ್ಥಿಯನ್ನಾಗಿ ಮಾಡಿರುವ ಕಾಂಗ್ರೆಸ್ ಇದೀಗ ಮತ್ತೊಂದು ಆಪರೇಷನ್ ಮಾಡುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದೆ.


ಬಿಜೆಪಿಯಿಂದ ಗೆದ್ದಿದ್ದ 7 ಜನ ನಗರಸಭಾ ಸದಸ್ಯರ ಪೈಕಿ 6 ಮಂದಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.


ನಗರಸಭಾ ಸದಸ್ಯ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರ್ಪಡೆಯಾದರು. ಇವರೆಲ್ಲ 2021-22 ರಲ್ಲಿ ನಗರಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಒಟ್ಟು 31 ನಗರಸಭಾ ಸದಸ್ಯರ ಪೈಕಿ 07 ಜನ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್ ನಿಂದ ಗೆದ್ದಿದ್ದರು.


ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಕಳೆದ ಬಾರಿ ಕುಮಾರಸ್ವಾಮಿಯವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ. ಆದರೆ ಅವರು ಏನಾದರೂ ಕೆಲಸ ಮಾಡಿದ್ದಾರಾ? ರಾಮನಗರ ಬಳಿಕ ಚನ್ನಪಟ್ಟಣಕ್ಕೆ ಬಂದಿದ್ದರು. ಈಗ ಮಂಡ್ಯಕ್ಕೆ ಹೋಗಿದ್ದಾರೆ. ಈಗ ಮತ್ತೆ ಮಗನನ್ನು ಗೆಲ್ಲಿಸಿಕೊಳ್ಳಲು ಚನ್ನಪಟ್ಟಣಕ್ಕೆ ಕರೆತಂದಿದ್ದಾರೆ. ಹೆಚ್ಡಿಕೆ ಮಾಡಿದ ಒಂದು ಕೆಲಸವಾದರೂ ನಿಮಗೆ ಸಮಾಧಾನ ತಂದಿದೆಯಾ ಎಂದು ಯೋಗೇಶ್ವರ್ ಪ್ರಶ್ನಿಸಿದರು.

Join Whatsapp
Exit mobile version