ಚನ್ನಪಟ್ಟಣ ಉಪಚುನಾವಣೆ; ಜೆಡಿಎಸ್ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ: ವಿಜಯೇಂದ್ರ

Prasthutha|

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಯಾರಾಗಬೇಕು ಅಂತ ನಾವು ಮತ್ತು ಜೆಡಿಎಸ್ ನಾಯಕರು ಅತೀ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು.

- Advertisement -

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತಾಡಿದ ವಿಜಯೇಂದ್ರ, ಡಿಕೆಶಿ ಅವರು ಈಗಾಗಲೇ ಶಾಸಕರು ಇದ್ದಾರೆ. ಆದರೂ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದ್ದಾರೆ .ಇದು ಅವರ ಪಕ್ಷದ ತೀರ್ಮಾನ. ಆದರೂ ಜನರ ಮನದಾಳದಲ್ಲಿ ಏನಿದೆ ಅನ್ನೋದು ಇನ್ನೂ ನಿಗೂಢವಾಗಿದೆ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸೋರೇ ಇಲ್ಲ ಅಂತ ಅವರು ಅನ್ಕೊಂಡಿದ್ರು. ಆದರೆ ಜನರ ತೀರ್ಪು ಏನಿತ್ತು ಅಂತ ಎಲ್ರೂ ನೋಡಿದ್ದೀರಿ ಅಂತ ಕಾಲೆಳೆದರು.

Join Whatsapp
Exit mobile version