Home Uncategorized ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಒಡೆಯ!

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಒಡೆಯ!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.


ಬಿಬಿಎ ಪದವೀಧರನಾಗಿರುವ ನಿಖಿಲ್ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.


ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ.


ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ.


ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮಾತನಾಡಿ, ನಾಮಪತ್ರ ಸಲ್ಲಿಕೆ ವೇಳೆ ಜನಸ್ತೋಮವೇ ಕಾಂಗ್ರೆಸ್ಗೆ ಉತ್ತರ. ಸಿಎಂ, ಡಿಸಿಎಂ ಸಾಕಷ್ಟು ಮಾತನಾಡಿದ್ದಾರೆ.

2018ರಲ್ಲಿ ನೀವೆ ಚುನಾವಣೆ ನಡೆಸಿ ಗೆಲ್ಲಿಸಿದ್ರಿ. ಒಂದು ದಿನ ನಾನು ಮತಕೇಳಲು ಬರಲಿಲ್ಲ. ಏಕಾಂಗಿಯಾಗಿ ರೈತರ ಪಕ್ಷ ಉಳಿಸಲು ಶ್ರಮಹಾಕಿದ್ದೇನೆ. ರಾಜ್ಯದಲ್ಲಿ ರೈತಪರ ಧ್ವನಿ ಎತ್ತಲು ಶಕ್ತಿ ಕೊಟ್ಟಿದ್ದೀರಿ. ರಾಮನಗರ ಜನ ನಾಲ್ಕು ಬಾರಿ ಆಯ್ಕೆ ಆಗಿದೆ.


ನಾನು ಸಿಎಂ ಆಗಿ 14 ತಿಂಗಳು ರಾಜ್ಯದಲ್ಲಿ ಆಡಳಿತ ಮಾಡಿದೆ. ಕಾಂಗ್ರೆಸ್ ನವರು ಅಧಿಕಾರ ಮಾಡಲು ಬಿಡಲಿಲ್ಲ. ಆದರೂ ರೈತರ ಸಾಲಮನ್ನಾ ಮಾಡಿದ್ದೆನೆ. ಸಾಕಷ್ಟು ಕ್ಷೇತ್ರಕ್ಕೆ ಅನುದಾನ ನೀಡಿ ಅಭಿವೃದ್ಧಿ ಮಾಡಿದ್ದೇನೆ ಎಂದರು.

Join Whatsapp
Exit mobile version