‘ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ’
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಹಾಜರಿದ್ದರು.
ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಭರ್ಜರಿ ರೋಡ್ ಶೋ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಲವಾರು ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ರೋಡ್ ಶೋದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್, ಬಿಜೆಪಿ ನನಗೆ ಟಿಕೆಟ್ ಕೊಡಲ್ಲ ಎಂಬುದು ಗೊತ್ತಿತ್ತು. ನಿನ್ನೆವರೆಗೂ ಕಾದಿದ್ದೆ ಎಂದರು.
ಅಲ್ಲದೆ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ಒಂದೆರಡು ದಿನ ಕಾದಿದ್ದರೆ, ರಾಜಕೀಯವಾಗಿ ನನ್ನ ಮುಗಿಸುವ ಸಂಚು ಹೂಡಲಾಗಿತ್ತು ಎಂದು ಆರೋಪಿಸಿದರು.