Home ಟಾಪ್ ಸುದ್ದಿಗಳು ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಭೋಪಾಲ್: ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ಭೋಪಾಲ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಯಾದವ್, ‘ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಡೆದ ಹೋರಾಟದ ಬಗ್ಗೆ ಇಂದಿನ ಪೀಳಿಗೆಗೆ ಅರಿವು ಮೂಡಿಸುವುದು ಅಗತ್ಯ. ಹಾಗಾಗಿ ಅಂದಿನ ಕಾಂಗ್ರೆಸ್ ಸರ್ಕಾರ ಕೈಗೊಂಡ ಕಠಿಣ ಕ್ರಮ, ಅದನ್ನು ವಿರೋಧಿಸಿ ದೇಶದಲ್ಲಿ ನಡೆದ ಹೋರಾಟದ ಸನ್ನಿವೇಶಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಲಾಗುವುದು’ ಎಂದು ಹೇಳಿದರು.


ಇದೇ ವೇಳೆ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದವರಿಗೆ ಹಲವಾರು ಹೆಚ್ಚುವರಿ ಸೌಲಭ್ಯಗಳನ್ನು ಘೋಷಿಸಿದರು. ಸರ್ಕಾರಿ ಅತಿಥಿ ಗೃಹಗಳಲ್ಲಿ ಮೂರು ದಿನಗಳ ಕಾಲ ಶೇ.50 ರಿಯಾಯಿತಿ ದರದಲ್ಲಿ ತಂಗಲು ಸೌಲಭ್ಯ ಕಲ್ಪಿಸಲಾಗುವುದು. ಅವರು ಹೆದ್ದಾರಿಯಲ್ಲಿ ಟೋಲ್ ಪಾವತಿಸುವಲ್ಲಿ ವಿನಾಯಿತಿ ಪಡೆಯುತ್ತಾರೆ. ಆಯುಷ್ಮಾನ್ ಹೆಲ್ತ್ ಕಾರ್ಡ್ ಮೂಲಕ ಚಿಕಿತ್ಸಾ ವೆಚ್ಚ ಪಾವತಿಸಲು ವಿಳಂಬ ಮಾಡುವುದಿಲ್ಲ ಎಂದು ಕೂಡ ಹೇಳಿದರು.

Join Whatsapp
Exit mobile version