ಚಂಡೀಗಡ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ದಲಿತ ಸಿಖ್ ಮುಖಂಡ ಚರಣ್ ಜಿತ್ ಸಿಂಗ್ ಚನ್ನಿ ಅವರು ಇಂದು ಪಂಜಾಬ್ ನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದರು.
ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚನ್ನಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಪಂಜಾಬ್ ನಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನಿಂದಾಗಿ ಹಠಾತ್ ರಾಜೀನಾಮೆ ನೀಡಿದ್ದ ಅಮರೀಂದರ್ ಸಿಂಗ್ ಅವರ ಸ್ಥಾನಕ್ಕೆ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಶಾಸಕಾಂಗ ಸಭೆಯ ಮುಖ್ಯಸ್ಥರಾಗಿ ನಿನ್ನೆ ಆಯ್ಕೆಯಾಗಿದ್ದರು. ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಪಂಜಾಬ್ ರಾಜ್ಯಪಾಲರಾದ ಬನ್ವರಿ ಲಾಲ್ ಪುರೋಹಿತ್ ಅವರು ಪ್ರಮಾಣವಚನ ಭೋದಿಸಿದರು.