Home ಟಾಪ್ ಸುದ್ದಿಗಳು ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ ಆಯ್ಕೆ!

ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ ಆಯ್ಕೆ!

ಚಂಡೀಗಡ: ಸಾಕಷ್ಟು ಕುತೂಹಲ ಮೂಡಿಸಿದ್ದ ಪಂಜಾಬ್ ರಾಜಕೀಯ ಬಿಕ್ಕಟ್ಟಿಗೆ ಕೊನೆಗೂ ತೆರೆ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ದಲಿತ ಮುಖಂಡ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.

ನಿನ್ನೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಅಮರೀಂದರ್ ಸಿಂಗ್ ಅವರ ಹಠಾತ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಅಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

ಅಮರೀಂದರ್ ಸಿಂಗ್ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿರುವ ಚರಣ್ ಜಿತ್ ಸಿಂಗ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

Join Whatsapp
Exit mobile version