ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅಶ್ಲೀಲವಾಗಿ ಮಾತನಾಡಿದ್ದು, ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಭಟ್ ಪರವಾಗಿ ಸೀನಿಯರ್ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಜ್ಯೂನಿಯರ್ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.
ಪೊಲೀಸ್ ತನಿಖೆಯಲ್ಲಿ ಆರೋಪ ಸಾಬೀತು ಹಿನ್ನೆಲೆ ದೂರುದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಎಸ್ ಬಾಲನ್, ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಬೇಕು ಎಂದು ವಾದ ಮಂಡಿಸಿದ್ದಾರೆ.
ವಿಚಾರಣೆ ಜನವರಿ 10 ಕ್ಕೆ ಮುಂದೂಡಲಾಗಿದೆ.