Home ಕರಾವಳಿ ಖಾಸಗಿ ಬ್ಯಾಂಕ್ ಉದ್ಯೋಗಸ್ಥನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಖಾಸಗಿ ಬ್ಯಾಂಕ್ ಉದ್ಯೋಗಸ್ಥನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಉಡುಪಿ: ವ್ಯಕ್ತಿಯೊಬ್ಬರ ಮೃತದೇಹ ಮನೆಯ ಕೊಠಡಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ವಾದಿರಾಜ ರಸ್ತೆಯಲ್ಲಿ ನಡೆದಿದೆ.


ಮೃತ ವ್ಯಕ್ತಿಯನ್ನು ರಾಜಗೋಪಾಲ್ ಸಾಮಗ (42) ಎಂದು ಗುರುತಿಸಲಾಗಿದೆ. ಖಾಸಗಿ ಬ್ಯಾಂಕಿನ ಹೈದರಬಾದ್ ಶಾಖೆಯಲ್ಲಿ ಲೀಗಲ್ ಆಫೀಸರ್ ಕೆಲಸ ನಿರ್ವಹಿಸುತ್ತಿದ್ದ ಇವರು, ಕೆಲವು ಸಮಯಗಳ ಹಿಂದೆ ಮಂಗಳೂರಿಗೆ ವರ್ಗಾವಣೆಗೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಮನೆಯಲ್ಲೇ ಕೆಲಸ ಮಾಡುತ್ತಿದ್ದರು.


ಮನೆಯ ಮೇಲಿನ ಮಹಡಿಯ ಕೊಠಡಿಯ ಕಿಟಕಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯವರು ಸಾಮಗರ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿ ಶಾಮಕದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಕೋಣೆಯ ಬಾಗಿಲು ಮುರಿದು ಪರಿಶೀಲಿಸಿದಾಗ ರಾಜ ಗೋಪಾಲ್ ಸಾಮಗ ಬೆಂಕಿಯಿಂದ ಸುಟ್ಟು ಮೃತಪಟ್ಟಿರುವುದು ಕಂಡುಬಂದಿದೆ.


ರಾಜಗೋಪಾಲ ಕೆಲಸ ಮಾಡುತ್ತಿದ್ದಾಗ ಲ್ಯಾಪ್‌ಟಾಪ್‌ ಸಿಡಿದು ಮೃತಪಟ್ಟಿರಬಹುದೆಂದು ಮನೆಯವರು ದೂರಿದ್ದಾರೆ.


ಸ್ಥಳಕ್ಕೆ ಉಡುಪಿ ನಗರ ಠಾಣಾ ನಿರೀಕ್ಷಕ ಪ್ರಮೋದ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಇದೇ ಚಿಂತೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version