ಬೆಂಗಳೂರು: ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀ ಕೊರ್ಟ್ ಮೊರೆ ಹೋಗಿದ್ದಾರೆ.
ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಭಿನವ ಹಾಲಶ್ರೀ ಪರ ವಕೀಲರು 57ನೇ CCH ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿ ವಿಚಾರಣೆ ನಾಳೆ (ಸೆಪ್ಟೆಂಬರ್ 16) ನಡೆಯಲಿದೆ.