ವಂಚನೆ ಪ್ರಕರಣ: ಅಜ್ಞಾತ ಸ್ಥಳದಿಂದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ ಹಾಲಶ್ರೀ

Prasthutha|

ಬೆಂಗಳೂರು: ವಿಧಾನಸಭೆ ಟಿಕೆಟ್​ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀ ಕೊರ್ಟ್ ಮೊರೆ ಹೋಗಿದ್ದಾರೆ.

- Advertisement -

ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಭಿನವ ಹಾಲಶ್ರೀ ಪರ ವಕೀಲರು 57ನೇ CCH​​ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿ ವಿಚಾರಣೆ ನಾಳೆ (ಸೆಪ್ಟೆಂಬರ್ 16) ನಡೆಯಲಿದೆ.

Join Whatsapp