Home ಟಾಪ್ ಸುದ್ದಿಗಳು ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು: ಕುಂಬಳಗೋಡು ಕೈಗಾರಿಕಾ ಪ್ರದೇಶದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಕಿ ಅವಘಡದಿಂದ ಕೈಗಾರಿಕಾ ಪ್ರದೇಶದ ಸೋನಿಯಾ ಕೆಮಿಕಲ್ ಫ್ಯಾಕ್ಟರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸೋನಿಯಾ ಇಂಡಸ್ಟ್ರೀಸ್ನ ಲ್ಲಿ ಬ್ಯಾಟರಿಗೆ ಬಳಸುವ ಆಸಿಡ್ ಸಂಗ್ರಹಿಸಲಾಗಿತ್ತು ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ತಗುಲಿದ ಬೆಂಕಿಯನ್ನು ಸುಮಾರು 8 ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version