Home ಟಾಪ್ ಸುದ್ದಿಗಳು ನವೆಂಬರ್ 11ರಿಂದ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

ನವೆಂಬರ್ 11ರಿಂದ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

ಚೆನ್ನೈ: ಚೆನ್ನೈನ ಎಂಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಭಾರತೀಯ ರೈಲ್ವೆ ಸೋಮವಾರ ಪ್ರಾರಂಭಿಸಿದೆ.

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್  ರೈಲಿಗೆ ನವೆಂಬರ್ 11 ರಂದು ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದು, ಇದು ಭಾರತದ ದಕ್ಷಿಣ ಭಾಗದಲ್ಲಿ ದೇಶೀಯವಾಗಿ ನಿರ್ಮಿಸಲಾದ ಮೊದಲ ಹೈಸ್ಪೀಡ್ ರೈಲು ಮತ್ತು ದೇಶದ ಐದನೇ ರೈಲು. ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಫೆಬ್ರವರಿ 15, 2019 ರಂದು ನವದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಹಸಿರು ನಿಶಾನೆ ತೋರಿಸಲಾಯಿತು.

ಆಗಸ್ಟ್ 15, 2021 ರಂದು ಕೆಂಪು ಕೋಟೆಯ ಮೇಲಿನಿಂದ ದೇಶವನ್ನುದ್ದೇಶಿಸಿ ಭಾಷಣ ಪ್ರಧಾನಿ ಮೋದಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ 75 ವಾರಗಳಲ್ಲಿ, 75 ವಂದೇ ಭಾರತ್ ರೈಲುಗಳು ದೇಶದ ಮೂಲೆ ಮೂಲೆಗಳನ್ನು ಸಂಪರ್ಕಿಸುತ್ತವೆ ಎಂದು ಘೋಷಿಸಿದರು.

Join Whatsapp
Exit mobile version