Home ಟಾಪ್ ಸುದ್ದಿಗಳು ಭಾರಿ ಮಳೆಯಿಂದಾಗಿ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತ: ಪ್ರವಾಹದ ಎಚ್ಚರಿಕೆ

ಭಾರಿ ಮಳೆಯಿಂದಾಗಿ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತ: ಪ್ರವಾಹದ ಎಚ್ಚರಿಕೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ  ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡ ಪರಿಣಾಮ ಜನರಿಗೆ ಪ್ರಾಥಮಿಕ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.  

ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಹಿರಿಯ ಅಧಿಕಾರಿಗಳ ಜೊತೆಗೂಡಿ ಸಂತ್ರಸ್ತರಿಗೆ ಸ್ವತಃ ಆಹಾರ ಬಡಿಸಿದರು. ಅಲ್ಲದೆ ಪ್ರವಾಹ ಸ್ಥಿತಿಯನ್ನು ಎದುರಿಸಲು ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಚೆಂಬರಂಬಾಕ್ಕಂ  ಸೇರಿದಂತೆ ಮೂರು  ಜಲಾಶಯಗಳಿಂದ ಹಂತಹಂತವಾಗಿ ಹೆಚ್ಚುವರಿ ನೀರನ್ನು ಹೊರಬಿಡುವ ಕಾರಣದಿಂದಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಮುನ್ನಚ್ಚೆರಿಕೆಯ ಕ್ರಮವಾಗಿ ಅಂತಹ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಕಾಂಚೀಪುರಂ ಹಾಗೂ ತಿರುವಳ್ಳೂರ್ ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ ಪ್ರವಾಹದ ಎಚ್ಚರಿಕೆ ನೀಡಿರುವ ಜಲಸಂಪನ್ಮೂಲ ಅಧಿಕಾರಿಗಳು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚನೆ ನೀಡಿದ್ದಾರೆ.

 ಚೆನ್ನೈನ ಪೆರಂಬೂರ್, ಅಡ್ಯಾರ್, ಒಎಂಆ್ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ರಸ್ತೆಗಳಲ್ಲಿ ನೀರು ನಿಂತಿರುವ ಪರಿಣಾಮ ಸಂಚಾರವೂ ಬಹುತೇಕ ಕಡೆ ಸಂಪೂರ್ಣ ಬಂದ್ ಆಗಿದೆ. ಪ್ರವಾಹ ಪರಿಸ್ಥಿಯನ್ನು ಎದುರಿಸಲು ರಾಷ್ಟ್ರೀಯ ವಿಕೋಪ ರಕ್ಷಣಾ ಪಡೆಯ 4 ತುಕಡಿಗಳನ್ನು ನಿಯೋಜಿಸಲಾಗಿದೆ. ಚೆನ್ನೈನಲ್ಲಿ 2015ರಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು

Join Whatsapp
Exit mobile version