ಬೆಂಗಳೂರು: ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
32ನೇ ಎಸಿಎಂಎಂ ನ್ಯಾಯಾಲಯಕ್ಕೆ ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಮಂಗಳವಾರ ಹಾಜರುಪಡಿಸಿದ್ದರು. ನ್ಯಾಯಾಧೀಶರು ಚೇತನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.