ಛತ್ತೀಸ್’ಗಢದಲ್ಲಿ ಎನ್ ಕೌಂಟರ್: 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

Prasthutha|

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ 8 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

- Advertisement -

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ರಾಯಪುರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಗುಂಡಿನ ಚಕಮಕಿ ಮುಂದುವರಿದಿದೆ. ಈವರೆಗೆ 8 ಮಂದಿ ನಕ್ಸಲರು ಹತರಾಗಿದ್ದಾರೆ. ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Join Whatsapp