ಟ್ರ್ಯಾಕ್ಟರ್-ಟ್ರಕ್ ಡಿಕ್ಕಿ: ಐವರು ಸಾವು, 17 ಮಂದಿ ಗಾಯ

Prasthutha|

ರಾಯ್ಪುರ: ಟ್ರಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ .

- Advertisement -

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ತಿರುವು ಪಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಮಜರ್ಕಟ್ಟಾ ಗ್ರಾಮದ ಗ್ರಾಮಸ್ಥರ ಗುಂಪು ಗರಿಯಾಬಂದ್ ನಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಮೊಹ್ಲೈ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗಿದ್ದರು. ಟ್ರಾಕ್ಟರ್ ಚಾಲಕ ತಿರುವು ತೆಗೆದುಕೊಳ್ಳುತ್ತಿದ್ದಾಗ ಜೋಬಾ ಬಳಿ ತಿರುವು ಪಡೆಯಲು ವೇಗವಾಗಿ ಚಲಿಸುತ್ತಿದ್ದಾಗ ವಾಹನವು ಟ್ರಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

- Advertisement -

ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್-ಟ್ರಾಲಿಯು ಎರಡು ಭಾಗಗಳಾಗಿ ಸ್ಥಳದಲ್ಲೇ ಬೇರ್ಪಟ್ಟಿದ್ದು, ಕನಿಷ್ಠ ಐದು ಜನರು, ಬಹುತೇಕ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮಕ್ಕಳು, ವೃದ್ಧರು ಸೇರಿದಂತೆ 17 ಜನರು ಗಾಯಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡ 14 ಮಂದಿಯನ್ನು ತಕ್ಷಣ ನೆರೆಯ ರಾಯ್ ಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು, ಏಳು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಸುತ್ತಮುತ್ತಲಿನ ಜನರು ರಕ್ಷಣೆಗಾಗಿ ಓಡಿದ್ದಾರೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಗಾಗಿ 50 ಸಾವಿರ ರೂ. ಪರಿಹಾರ ಧನ ಘೋಷಿಸಿದ್ದಾರೆ.

Join Whatsapp