ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ, ಟಿಎಂಸಿ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳೊಂದಿಗೆ ಮುಕ್ತವಾಗಿ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ತಿಳಿಸಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಬಳಿಕ ಸುದ್ದಿವಾಹಿನಿವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಸೋನಿಯಾ ಗಾಂಧಿ ಅವರನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ CWC ಸಭೆಯಲ್ಲಿ ಗಾಂಧಿ ಕುಟುಂಬವು ಪಕ್ಷದ ಎಲ್ಲಾ ಹುದ್ದೆಗಳನ್ನು ತ್ಯಜಿಸಲು ಪ್ರಸ್ತಾಪವನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಮುಂದಿನ ಆಗಸ್ಟ್ ವರೆಗೆ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದರಿಂದ ಬಿಜೆಪಿಯನ್ನು ಸೋಲಿಸಲು ಸಾಧ್ಯವಿದೆ ಎಂದು ಸಾಂದರ್ಭಿಕವಾಗಿ ನುಡಿದಿದ್ದಾರೆ.
ಆಗಸ್ಟ್ ನಲ್ಲಿ ಪಕ್ಷವು ಪೂರ್ಣ ಪ್ರಮಾಣದ ನಾಯಕತ್ವವನ್ನು ಕಂಡುಕೊಳ್ಳಲಿದೆ ಮತ್ತು ಆ ನಾಯಕತ್ವದಲ್ಲಿ ಪಕ್ಷ ಸಂಘಟನೆಗೆ ಬೇಕಾದ ಅಗತ್ಯ ಮತ್ತು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.