Home ಟಾಪ್ ಸುದ್ದಿಗಳು ಮುಖ್ಯ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿಪಕ್ಷ ನಾಯಕ, ಸಿಜೆಐ ಇರುವ ಸಮಿತಿ ನೇಮಕ ಮಾಡಬೇಕು: ಸುಪ್ರೀಂಕೋರ್ಟ್

ಮುಖ್ಯ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿಪಕ್ಷ ನಾಯಕ, ಸಿಜೆಐ ಇರುವ ಸಮಿತಿ ನೇಮಕ ಮಾಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.


ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಎಲ್’ಒಪಿ ಇಲ್ಲದಿದ್ದರೆ, ಲೋಕಸಭೆಯಲ್ಲಿ ಏಕೈಕ ಅತಿದೊಡ್ಡ ವಿರೋಧ ಪಕ್ಷದ ನಾಯಕ, ಇಸಿ ಮತ್ತು ಸಿಇಸಿಯನ್ನು ನೇಮಕ ಮಾಡುವ ಸಮಿತಿಯಲ್ಲಿರಬೇಕು ಎಂದು ಹೇಳಿದರು.


ಈ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸುವವರೆಗೆ ಈ ಕ್ರಮ ಜಾರಿಯಲ್ಲಿರುತ್ತದೆ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ತೀರ್ಪು ನೀಡಿದ್ದಾರೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು ಭಾರತದ ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆಯನ್ನು ಶಿಫಾರಸು ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

Join Whatsapp
Exit mobile version