ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

Prasthutha|

ಢಾಕಾ: ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡಿದ್ದಾರೆ.

- Advertisement -

ಒಬೈದುಲ್ ಹಸನ್ ಅವರು ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತರಾಗಿದ್ದರು. ಈ ಹಿನ್ನೆಲೆಯಲ್ಲಿ ಢಾಕಾದ ನ್ಯಾಯಾಲಯದ ಹೊರಗೆ ಜಮಾಯಿಸಿದ್ದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಒಬೈದುಲ್ ಹಸನ್ ರಾಜೀನಾಮೆ ನೀಡಲು ಒಂದು ಗಂಟೆ ಸಮಯಾವಕಾಶ ನೀಡಿದ್ದರು.


ಬಾಂಗ್ಲಾದೇಶ ಬ್ಯಾಂಕ್ ಗವರ್ನರ್ ಅಬ್ದುರ್ ರೂಫ್ ತಾಲೂಕ್ದರ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp